(www.vknews.in) ಕೆಮ್ಮಾರ:- ದಿನಾಂಕ:26/12/2022 ರಂದು ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ವತಿಯಿಂದ ನಿರ್ಮಾಣಗೊಂಡ ಸುಸಜ್ಜಿತ ಕೈತೊಳೆಯುವ ಬೇಸಿನ್ ನನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ , ನಮ್ಮೂರ ಶಾಲೆಯ ಅಭಿವೃದ್ಧಿ ನಮ್ಮಿಂದಲೇ ಅನ್ನೋ ದೃಷ್ಟಿಕೋನವನ್ನು ಇಟ್ಟುಕೊಂಡು ಹಳೆ ವಿದ್ಯಾರ್ಥಿಗಳು ಮಾಡಿದ ಈ ಸೇವೆ ಶ್ಲಾಘನೀಯ. ಹಳೆ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಈ ನಮ್ಮೂರ ಶಾಲೆ ಇನ್ನೂ ಉತ್ತುಂಗಕ್ಕೇರುವುದರಲ್ಲಿ ಸಂಶಯವಿಲ್ಲ ಎಂದು ಸರ್ವ ಹಳೆ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಶ್ರೀ ಎಮ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಶಾಲಾ ಹಾಗೂ ಸಾರ್ವಜನಿಕ ಸ್ವತ್ತುಗಳು ನಮ್ಮ ಸ್ವತ್ತುಗಳು, ಇದರ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ವಿವರಿಸಿದರು.
ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಬಡಿಲ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟದ ರವಿಕಾಂತ ಬಡ್ಡಮೆ ಯವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯೆ ಶ್ರೀಮತಿ ವಾರಿಜಾಕ್ಷಿ ಬಡ್ಡಮೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ, ಉಪಾಧ್ಯಕ್ಷೆ ಸುಮಯ್ಯ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಖಾದರ್ ಅಡೆಕ್ಕಲ್, ಅಬ್ಬಾಸ್, ಪದ್ಮನಾಭ ಶೆಟ್ಟಿ ಬಡಿಲ, ವಾಹನ ಬರಮೇಲು, ಶ್ರೀ ಕ್ಷೇತ್ರ.ಧ.ಗ್ರಾ.ಅ.ಯೋ.ಕೆಮ್ಮಾರ ಒಕ್ಕೂಟ ಅಧ್ಯಕ್ಷ ರವಿಕಾಂತ ಬಡ್ಡಮೆ, ಅದ್ಯಾಪಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಪದ್ಮನಾಭ ಶೆಟ್ಟಿ ಬಡಿಲ ಇವರ ವತಿಯಿಂದ ಸಿಹಿತಿಂಡಿ ವಿತರಣೆ ನಡೆಯಿತು. ಕಾರ್ಯಕ್ರಮಕ್ಕೆ ಶಿಕ್ಷಕಿ ಶ್ರೀಮತಿ ಸುಮನಾ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿ ವಂದಿಸಿದರು, ಕಾರ್ಯಕ್ರಮ ಶಿಕ್ಷಕಿ ಶ್ರೀಮತಿ ಮೆಹನಾಝ್ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.