(www.vknews.in) : 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ.
ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ ಪುತ್ರಿಯಾಗಿದ್ದು, ಪ್ರಸ್ತುತ ಎ ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.
ಇತ್ತೀಚೆಗೆ ನಡೆದ ಪದವಿಪ್ರಧಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರ್ಯಾಂಕ್ ಪಡೆದಿರುತ್ತಾರೆ. ಪುತ್ತೂರು ಕಮ್ಯೂನಿಟಿ ಸೆಂಟರ್ನ ಕೌನ್ಸಿಲರ್ ಆಗಿರುವ ಇವರು ಹಲವಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರೇರಣೆ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಪುತ್ತೂರು ಕಮ್ಯೂನಿಟಿ ಸೆಂಟರ್ನ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.