ಸೌದಿ ಅರೇಬಿಯಾ (ವಿಶ್ವ ಕನ್ನಡಿಗ ನ್ಯೂಸ್) : ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುರತ್ಕಲ್ ನಿವಾಸಿ ಯುವಕ ಮೃತಪಟ್ಟ ಘಟನೆ ನಡೆದಿದೆ.
ಸುರತ್ಕಲ್ ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟಿನ ಅದ್ದು ಎಂಬವರ ಮಗ ಫಾಝಿಲ್ ಮೃತಪಟ್ಟ ಯುವಕ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಫಾಝಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಫಾಝಿಲ್ ಗೆ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದು, ಪುಟ್ಟ ಮಗು ಇದೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.