ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕ್ರಿಕೆಟಿಗ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಹಮ್ಮದ್ಪುರ ತ್ಸಾಲ್ ಬಳಿಯ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.
ರಿಷಬ್ ಪಂತ್ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.