(www.vknews.in) .ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ಜನಸ್ಪಂದನಾ ಸಮಾವೇಶ ಹಾಗೂ ಗೌರವಾಭಿನಂದನೆ ಕಾರ್ಯಕ್ರಮವು ಮಂಗಳೂರು ನಗರದ ಹೊರವಲಯದ ಕಂಬಳಪದವಿನಲ್ಲಿರುವ ಮಂಡಲ ಚುನಾವಣಾ ಕಾರ್ಯಾಲಯದಲ್ಲಿ ರವಿವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಪತ್ರಕರ್ತ ಬಂಧುಗಳಿಗೆ ಗೌರವಾಭಿನಂದನೆ ನಡೆಯಿತು. ಇದೇ ವೇಳೆ ಝೀ ಕನ್ನಡ ನ್ಯೂಸ್ ಚಾನೆಲ್ ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ವರದಿಗಾರ ಶಂಶೀರ್ ಬುಡೋಳಿ ಅವರಿಗೆ ಗೌರವ ಅಭಿನಂದನೆ ಕಾರ್ಯಕ್ರಮ ನಡೆಯಿತು.
ಸಭಾ ವೇದಿಕೆಯಲ್ಲಿ ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್ಹೌಸ್, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಜ, ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಹಿರಿಯ ಮುಖಂಡರಾದ ಚಂದ್ರಶೇಖರ್ ಉಚ್ಚಿಲ್, ಚಂದ್ರಹಾಸ ಉಳ್ಳಾಲ್, ರಾಜಾರಾಮ್ ಭಟ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಹಾಗೂ ಮುಖಂಡರಾದ ಸಂತೋಷ್ ಶೆಟ್ಟಿ ಅಸೈಗೋಳಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಹೇಮಂತ್ ಶೆಟ್ಟಿ ಹಾಗೂ ನವೀನ್ ಪಾದಲ್ಪಾಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.