ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) : ಸೂರಲ್ಪಾಡಿ ನಿವಾಸಿಯಾಗಿರುವ ಹಾಗೂ ದ.ಕ.ಜಿಲ್ಲಾ ಮದ್ರಸ ಮೆನೇಜ್ಮೆಂಟ್ ನೂತನ ಅಧ್ಯಕ್ಷರೂ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆಗೈಯ್ಯುತ್ತಿರುವ ಮತ್ತು ಕೊಡುಗೈದಾನಿಯಾಗಿರುವ ಸೂರಲ್ಪಾಡಿ ನೌಷಾದ್ ಹಾಜಿಯವರು(45) ಹಾಗು ಕಾರು ಚಾಲಕ ಉಳಾಯಿಬೆಟ್ಟು ನಿವಾಸಿ ಮುಷರಫ್ ಅವರು ವೇಣೂರು ಸಮೀಪದ ಗೋಳಿಯಂಗಡಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಕಾರು ಹಾಗೂ ಬಸ್ಸು ಮುಖಾಮುಖಿ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನೌಷಾದ್ ಹಾಜಿಯವರು ಅವರು ದ.ಕ.ಜಿಲ್ಲಾ ಮದ್ರಸ ಮೆನೇಜ್ಮೆಂಟ್ ಅಧ್ಯಕ್ಷರಾಗಿದ್ದರು ಅಲ್ಲದೇ ನಂಡೆ ಪೆಂಙಳ್ ಅಭಿಯಾನದ ಸ್ಥಾಪಕಾಧ್ಯಕ್ಷರಾಗಿದ್ದರು. ಇವರು ಬೆಳ್ತಂಗಡಿಯ ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಕೋಶಾಧಿಕಾರಿಯಾಗಿ, ಮೂಡುಬಿದಿರೆ ಕಾಶಿಪಟ್ಣದ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಉಪಾಧ್ಯಕ್ಷರಾಗಿ, ಗುರುಪುರ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ವಿವಿಧ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.