ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವ್ಯಕ್ತಿಯೋರ್ವರು ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಕಾರಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಗರದ ಹೆಚ್ಎಸ್ಆರ್ ಲೇಔಟ್ ನಿವಾಸಿ ಪ್ರದೀಪ್ (47) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಡೆತ್ನೋಟ್ನಲ್ಲಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಡೆತ್ನೋಟ್ನಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್ ರೆಡ್ಡಿ, ಕೆ.ಗೋಪಿ, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖಿಸಿ 6 ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಸಂಬಂಧ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರತಿಯೊಬ್ಬರ ಹೆಸರಿನ ಮುಂದೆ ಮೊಬೈಲ್ ನಂಬರ್ ಬರೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.