(ವಿಶ್ವ ಕನ್ನಡಿಗ ನ್ಯೂಸ್) : ಚೀನಾದಲ್ಲಿ ಭಾರತದಿಂದ ವೈದ್ಯಕೀಯ ವ್ಯಾಸಂಗಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಅಬ್ದುಲ್ ಶೇಖ್(22) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ವಿದ್ಯಾರ್ಥಿಯ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ವಿದೇಶಾಂಗ ಸಚಿವಾಲಯದ ಮೊರೆ ಹೋಗಿದ್ದಾರೆ.
ತಮಿಳನಾಡು ಮೂಲದವರಾದ ಅಬ್ದುಲ್ ಶೇಖ್, ಕಳೆದ 5 ವರ್ಷಗಳಿಂದ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಅವರು, ಇಂಟರ್ನ್ ಶಿಪ್ ಗಾಗಿ ಮತ್ತೆ ಚೀನಾಕ್ಕೆ ತೆರಳಿದ್ದರು ಎನ್ನಲಾಗಿದೆ. ಚೀನಾದಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.