(www.vknews.in) ಮಂಗಳೂರು.* ದ.ಕ.ಜಿಲ್ಲೆಯ ಧಾರ್ಮಿಕ, ಸಾಮಾಜಿಕ ಮುಖಂಡ,ದ.ಕ.ಜಿಲ್ಲಾ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ನೌಶಾದ್ ಹಾಜಿ ಸೂರಲ್ಪಾಡಿ ಅವರ ನಿಧನಕ್ಕೆ ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಸ್ಥಾಪಕಾಧ್ಯಕ್ಷ ಕೆ.ಎ.ಅಬ್ದುಲ್ ಅಝೀಝ್ ಝುಹ್ರಿ ಪುಣಚ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಅಧೀನದ “ನಂಡೆ ಪೆಂಙಳ್” ಅಭಿಯಾನದ ಸ್ಥಾಪಕಾಧ್ಯಕ್ಷರಾಗಿ ಬಡವರ ಕಣ್ಣೀರೊರೆಸುವ ಮಹತ್ಕಾರ್ಯದಲ್ಲಿ ನಿರತರಾಗಿದ್ದ ನೌಶಾದ್ ಹಾಜಿ ಸೂರಲ್ಪಾಡಿ ಸದಾ ನಗುಮುಖ ದೊಂದಿಗೆ ಸರ್ವರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದ ಹೃದಯವಂತ ಯುವ ನಾಯಕರಾಗಿದ್ದರು. ಇತ್ತೀಚೆಗೆ ದ.ಕ.ಜಿಲ್ಲಾ ಸಮಸ್ತ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಅವರ ಅಗಲಿಕೆಯು ಇಡೀ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಅವರು ತನ್ನ ಸಂತಾಪದಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.