(ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಕಾರ್ಯಕರ್ತರು ರಸ್ತೆ ಸಮಸ್ಯೆ, ಕಸದ ಬಗ್ಗೆ ಗಮನ ಹರಿಸದೆ ಲವ್ ಜಿಹಾದ್ ಕಡೆಗೆ ಗಮನ ಕೊಡಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ನಳೀನ್ ಕುಮಾರ್ ಜೀವನದಲ್ಲಿ ಒಮ್ಮೆ ಸತ್ಯ ಹೇಳಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ಅಭಿವೃದ್ಧಿ ವಿಚಾರದಲ್ಲಿ ಏನನ್ನೂ ಮಾಡಿಲ್ಲ, ಜನರು ಬಯಸಿದ್ದನ್ನು ಮಾಡಲು ಸಾಧ್ಯವಾಗದಿದ್ದಾಗ ಕೋಮುವಾದದತ್ತ ಮುಖ ಮಾಡುತ್ತಾರೆ, ಮಂಗಳೂರಿನಲ್ಲಿ ಶಾಂತಿಯುತ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.