ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ): ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕೇಂದ್ರ ಉಡುಪಿ, ಕ್ಷಯ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಹಾಗೂ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮವು ಸೋಮವಾರ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ, ಸಮೀಕ್ಷಾ ಸ್ಟಿಕ್ಕರ್ಗಳನ್ನು ಬಿಡುಗಡೆ ಮಾಡಿದರು.ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತ್ಯ ಶಂಕರ್ ಕ್ಷಯರೋಗ ಕುರಿತು ಜನರಿಗೆ ಮಾಹಿತಿ ನೀಡಿದರು.ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕ ಪ್ರಶಾಂತ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಪಿ.ಡಿ.ಓ ದಯಾನಂದ್ ಬೆನ್ನೂರು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಶ್ಯಾಮಲಾ ಹಾಗೂ ಅರ್ಚನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.