ಮಡಿಕೇರಿ (ವಿಶ್ವ ಕನ್ನಡಿಗ ನ್ಯೂಸ್) : ಆರನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿದೆ. ಕೀರ್ತನ್(12) ಮೃತಪಟ್ಟ ಬಾಲಕನಾಗಿದ್ದಾನೆ.
ಶನಿವಾರ ರಾತ್ರಿ ವೇಳೆ ಬಾಲಕ ನೋವಿನಿಂದ ಕಿರುಚಿಕೊಂಡಿದ್ದಾನೆ. ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.