ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕನಕಪುರ ತಾಲೂಕಿನ ಪಿಚ್ಚನಕೆರೆ ಬಳಿ ಶಾಲೆ ಮುಗಿಸಿ ನಲ್ಲಿ ಬರುವ ವೇಳೆ ಶಾಲಾ ಬಸ್ಸಿನಿಂದ ಚಕ್ರದಡಿಗೆ ಬಿದ್ದು ಯುಕೆಜಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ. ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯ ಯುಕೆಜಿ ವಿದ್ಯಾರ್ಥಿನಿ, ಸಿದ್ದೇನಹಳ್ಳಿಯ ಸ್ವಾಮಿ ಅವರ ಪುತ್ರಿ ರಕ್ಷಿತಾ (6) ಮೃತಪಟ್ಟ ಬಾಲಕಿ. ಶಾಲಾ ಬಸ್ ಚಾಲಕ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದು ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ವಿದ್ಯಾರ್ಥಿನಿ ಬಸ್ಸಿನ ಬಾಗಿಲ ಬಳಿಯ ಸೀಟ್’ನಲ್ಲಿ ಕುಳಿತಿದ್ದು, ಇತರ ವಿದ್ಯಾರ್ಥಿಗಳನ್ನು ಇಳಿಸಿ ಬಸ್ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿ ಬಸ್ ನ ಬಾಗಿಲು ಹಾಕಿರಲಿಲ್ಲ. ಚಾಲಕ ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಘಟನೆ ನಂತರ ಚಾಲಕ ಹಾಗೂ ಸಿಬ್ಬಂದಿ ಪರಾರಿಯಾಗಿದ್ದಾರೆ. ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.