ಬೆಳ್ತಂಗಡಿ (www.vknews.in) : ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಯುವಕನೊಬ್ಬನ ಶವ ಕುಳಿತ ಸ್ಥಿತಿಯಲ್ಲಿ ಜ.10 ರಂದು ಸಂಜೆ ಪತ್ತೆಯಾಗಿದೆ. ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ.
ಕಿರಣ್ ಯಾವ ರೀತಿಯಾಗಿ ಸಾವನ್ನಪ್ಪಿದ್ದಾನೆ ಎಂಬುದರ ಬಗ್ಗೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವಪರೀಕ್ಷೆ ಮಾಡಲು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.