ಕೊಡಗು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂತೋಷ್ ಎಂಬವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡ ಪಾರಾಮೆಡಿಕಲ್ ವಿದ್ಯಾರ್ಥಿನಿ.
ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಈಕೆ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಶಾಲನಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.