(www.vknews.in) ಬೆಳ್ತಂಗಡಿ (ಜ-11): ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರನ್ನೊಳಗೊಂಡ ಚುನಾವಣಾ ಉಸ್ತುವಾರಿಗಳ ಸಭೆಯು ಎಸ್ಡಿಪಿಐ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕಚೇರಿಯಲ್ಲಿ ನಡೆಯಿತು.
ಮುಖ್ಯ ಅಥಿತಿಗಳಾಗಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಆಗಮಿಸಿದ್ದರು. ಈ ಸಭೆಯಲ್ಲಿ ವಿಧಾನಸಭಾ ಕ್ಷೇತ್ರದ ನೂತನ ಪಕ್ಷ ಸಂಘಟನಾ ಕಾರ್ಯದರ್ಶಿಯಾಗಿ ನಿಸಾರ್ ಕುದ್ರಡ್ಕ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿಯೂ ಹಾಗೂ ಬೆಳ್ತಂಗಡಿ ವಿಧಾನಸಭಾ ಚುನಾವಣಾ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಕೋಶಾಧಿಕಾರಿ ಸಾಲಿ ಮದ್ದಡ್ಕ, ಜೊತೆ ಕಾರ್ಯದರ್ಶಿ ಫಝಲ್ ಉಜಿರೆ, ಬ್ಲಾಕ್ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕ್ಷೇತ್ರ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.