(www.vknews.in)ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ (ರಿ). ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉನ್ನತೀಕರಿಸುವ ಉದ್ದೇಶದಿಂದ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಷಯವಾರು ತರಬೇತಿ ಮತ್ತು ಪ್ರೇರಣಾ ತರಗತಿ ಕಾರ್ಯಾಗಾರ ದಿನಾಂಕ 11-01-2023 ಬುಧವಾರ ಬೆಳಿಗ್ಗೆ 10:00 ಘಂಟೆಗೆ ಸರಕಾರಿ ಪ್ರೌಢಶಾಲೆ ಕುಕ್ಕಾಜೆಯಲ್ಲಿ ನಡೆಯಿತು.
ಟ್ಯಾಲೆಂಟ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಕಣ್ಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸುಲೋಚನ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ತರಗತಿಯನ್ನು ನಡೆಸಿದರು. ಸ.ಹಿ.ಪ್ರಾ ಶಾಲೆ ಕುಕ್ಕಾಜೆ ಇದರ ಮುಖ್ಯ ಶಿಕ್ಷಕರಾದ ಶ್ರೀನಿವಾಸ ನಾಯ್ಕ ಅಧ್ಯಕ್ಷತೆ ವಹಿಸಿದರು. ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸರಕಾರಿ ಪ್ರೌಢಶಾಲೆ ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಶುಶಿಲ, ಸರಕಾರಿ ಪ್ರೌಢಶಾಲೆ ಮಂಚಿ ಕೋಲ್ನಾಡ್ ಇದರ ಸಮಾಜ ವಿಜ್ಞಾನ ಶಿಕ್ಷಕರಾದ ಶ್ರೀ ಜಗನ್ನಾಥ್ ಉಪಸ್ಥಿತರಿದ್ದರು.
ಈ ಕಾರ್ಯಾಗಾರದಲ್ಲಿ ಸರಕಾರಿ ಪ್ರೌಢಶಾಲೆ ಕುಕ್ಕಾಜೆ, ಸರಕಾರಿ ಪ್ರೌಢಶಾಲೆ ಮಂಚಿ ಕೋಲ್ನಾಡ್ ಇದರ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಭಾಗವಹಿಸಿದರು.
ಸರಕಾರಿ ಪ್ರೌಢಶಾಲೆ ಕುಕ್ಕಾಜೆ ಇದರ ಗಣಿತ ಶಿಕ್ಷಕಿಯಾದ ಶ್ರೀಮತಿ ಬಬಿತಾ ಧನ್ಯವಾದಗೈದರು. ಹಿರಿಯ ಶಿಕ್ಷಕರಾದ ಶ್ರೀ ಕೇಶವ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.