ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ಯುವಕನೋರ್ವನ ಮೃತದೇಹ ಗುರುವಾರ ಬೆಳಗ್ಗೆ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದನ್ನು ಕಂಡು ಸಂಶಯಗೊಂಡ ಸಾರ್ವಜನಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ದಳವನ್ನು ಕರೆಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಹುಡುಕಾಟ ನಡೆಸಿದಾಗ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ.
ಕಳೆದ ರಾತ್ರಿ ರಾಜೇಶ್ ಅವರು ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಅವರು ನದಿಗೆಸೆಯಲ್ಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಗೂಡಿನಬಳಿಯ ಮುಳುಗುತಜ್ಞರಾದ ಇಕ್ಬಾಲ್ (ಬಾಬಿ), ಮುಹಮ್ಮದ್( ಮಮ್ಮು), ಹಾರಿಸ್, ಇಬ್ರಾಹೀಂ ಎಂ.ಕೆ. ಅವರು ನದಿಯಲ್ಲಿ ಶೋಧ ಮತ್ತು ಮೃತದೇಹ ಮೇಲಕ್ಕೆತ್ತಲು ಸಹಕರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.