ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು ನಗರದ ಪ್ರತಿಷ್ಠಿತ 2 ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಬುಧವಾರ ಬಂಧಿಸಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿ ಇಂದು ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ತುಮಕೂರು ಮೂಲದ ವಿದ್ಯಾರ್ಥಿ ಡಾ.ಹರ್ಷ ಕುಮಾರ್, ಡಿ ಫಾರ್ಮ್ ವಿದ್ಯಾರ್ಥಿ ಕೇರಳದ ಅಧುನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುವ ಮುಹಮ್ಮದ್ ಅಫ್ರಾರ್(23) ಬಂಧಿತರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.