ಲೂಧಿಯಾನ (ವಿಶ್ವ ಕನ್ನಡಿಗ ನ್ಯೂಸ್) : ಭಾರತ್ ಜೋಡೋ ಯಾತ್ರೆ ವೇಳೆ ಕುಸಿದು ಬಿದ್ದು ಕಾಂಗ್ರೆಸ್ ಸಂಸದ ಸಾವನ್ನಪ್ಪಿದ್ದಾರೆ. ಮೃತರನ್ನು ಜಲಂಧರ್ ನ ಲೋಕಸಭಾ ಸದಸ್ಯ ಸಂದೋಖ್ ಸಿಂಗ್ ಚೌಧರಿ ಎಂದು ಗುರುತಿಸಲಾಗಿದೆ. ಪಂಜಾಬ್ನ ಫಿಲಲೂರ್ನಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ರಾಹುಲ್ ಗಾಂಧಿ ಅವರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಸಂದೋಖ್ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಕುಸಿದು ಬಿದ್ದರು.
ಸಂಸದರನ್ನು ತಕ್ಷಣವೇ ಆಂಬ್ಯುಲೆನ್ಸ್ ನಲ್ಲಿ ಪಗ್ವಾರದ ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅವರ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಸಾವಿಗೆ ಹೃದಯಾಘಾತವೇ ಕಾರಣ ಎಂಬ ಸೂಚನೆಗಳಿವೆ. ಸಂಸದರ ನಿಧನದ ನಂತರ ಭಾರತ್ ಜೋಡೋ ಯಾತ್ರೆ ಸ್ಥಗಿತಗೊಂಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.