ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ವಿಶ್ವ ಹಿಂದೂ ಪರಿಷತ್ ಬ್ಯಾನರ್ ಅಳವಡಿಸಿದೆ. ಕಾವೂರು ಜಾತ್ರೆ ಇಂದಿನಿಂದ ಆರಂಭಗೊಂಡಿದೆ. ಇಲ್ಲಿ ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಗಳು ಭಾಗವಹಿಸುವುದು, ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದ ರೂಢಿಯಾಗಿತ್ತು.
ಜನವರಿ 10ರಂದು ‘ಮುಸ್ಲಿಂ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂಬ ಬ್ಯಾನರ್ ಅಳವಡಿಸಲಾಗಿತ್ತು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ಅದನ್ನು ತೆರವುಗೊಳಿಸಲಾಗಿತ್ತು. ಶುಕ್ರವಾರ ಮತ್ತೆ ಇದೇರೀತಿ ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.