ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ನ ಎಂಬವರ ಪುತ್ರಿ ರಿಯೋನಾ ಅಮ್ಮನ್ನ(20) ಎಂಬವರು ನಾಪತ್ತೆಯಾಗಿದ್ದಾರೆ. ಇವರು ಜ.13ರಂದು ಉಡುಪಿಯ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಅನುಮತಿ ಪಡೆದು ಹೊರ ಹೋಗಿದ್ದರು. ಆ ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಆಕೆಯ ತಾಯಿ ರೀಟಾ ಅಮ್ಮನ್ನ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರ ಚಹರೆ ಇಂತಿದೆ ; 5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾಳೆ. ನೀಲಿ ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾಳೆ. ಈಕೆ ಕನ್ನಡ, ಇಂಗ್ಲೀಷ್, ತುಳು ಭಾಷೆ ಮಾತನಾಡುತ್ತಿದ್ದು, ಇವರ ಬಗ್ಗೆ ಮಾಹಿತಿ ಇದ್ದಲ್ಲಿ ಉಡುಪಿ ನಗರ ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.