ಕಠ್ಮಂಡು (ವಿಶ್ವ ಕನ್ನಡಿಗ ನ್ಯೂಸ್) : ನೇಪಾಳದಲ್ಲಿ 72 ಜನರಿದ್ದ ಯೇತಿ ಏರ್ಲೈನ್ಸ್ನ ಪ್ರಯಾಣಿಕ ವಿಮಾನವು ಭಾನುವಾರ ಪೊಖರಾದಲ್ಲಿ ಇಳಿಯುವಾಗ ಪತನಗೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (CAAN) ಪ್ರಕಾರ, ಯೇತಿ ಏರ್ಲೈನ್ಸ್ನ 9N-ANC ATR-72 ವಿಮಾನವು ಕಠ್ಮಂಡುವಿನಿಂದ ಬೆಳಿಗ್ಗೆ 10:33 ಕ್ಕೆ ಟೇಕ್ ಆಫ್ ಆಗಿತ್ತು.
ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ, ಹಳೆಯ ವಿಮಾನ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣದ ನಡುವಿನ ಸೇಟಿ ನದಿಯ ದಡದಲ್ಲಿ ವಿಮಾನ ಪತನಗೊಂಡಿದೆ. ಒಟ್ಟು 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಪಘಾತದ ವಿವರಗಳು ಇನ್ನಷ್ಟೇ ಬರಬೇಕಿದೆ.
#WATCH | A passenger aircraft crashed at Pokhara International Airport in Nepal today. 68 passengers and four crew members were onboard at the time of crash. Details awaited. pic.twitter.com/DBDbTtTxNc — ANI (@ANI) January 15, 2023
#WATCH | A passenger aircraft crashed at Pokhara International Airport in Nepal today. 68 passengers and four crew members were onboard at the time of crash. Details awaited. pic.twitter.com/DBDbTtTxNc
— ANI (@ANI) January 15, 2023
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.