ಚಿಕ್ಕಮಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಕಾರ್ಯಕರ್ತನೋರ್ವ ಪ್ರೀತಿಸಿ ವಂಚಿಸಿದ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೈದ ಪ್ರಕರಣ ಹೊರಬರುತ್ತಿದ್ದಂತೆ ಆರೋಪಿಯನ್ನು ಸಂಘಟನೆಯಿಂದ ಬಜರಂಗದಳ ಹೊರಹಾಕಿದೆ.
ಬಜರಂಗದಳ ಸಂಸೆ ಘಟಕದ ಸಂಯೋಜಕನಾಗಿದ್ದ ಆರೋಪಿ ನಿತೇಶ್, ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೀತಿಸಿ ವಂಚಿಸಿದ ಕಾರಣಕ್ಕೆ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು, ಪ್ರಕರಣ ಹೊರಬರುತ್ತಿದ್ದಂತೆ ಆರೋಪಿಯನ್ನು ಸಂಘಟನೆಯಿಂದ ಬಜರಂಗದಳ ಹೊರಹಾಕಿದೆ.
ನಿತೇಶ್ ಕಾರ್ಗದ್ದೆ ಅವರ ನಡವಳಿಕೆಯಲ್ಲಿ ಕೆಲವೊಂದು ಲೋಪದೋಷಗಳಿದ್ದು ಸಂಘಟನೆಯ ಸಿದ್ಧಾಂತಕ್ಕೆ ವಿರುದ್ಧವಾದ ಕಾರಣ ಅವರನ್ನು ಸಂಘಟನೆಯ ಜವಾಬ್ದಾರಿಗಳಿಂದ ತೆರವುಗೊಳಿಸುವುದಾಗಿ, ಹಿರಿಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ. ಬಜರಂಗದಕ್ಕೂ ನಿತೇಶ್ ಗೂ ಯಾವುದೇ ಸಂಬಂಧವಿಲ್ಲ ಎಂದು ಸಂಘಟನೆಯ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.