ಮಡಿಕೇರಿ (ವಿಶ್ವ ಕನ್ನಡಿಗ ನ್ಯೂಸ್) : ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ರವಿವಾರ ರಾತ್ರಿ ಯುವತಿಯೊಬ್ಬಳನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ನಾಂಗಾಲ ಗ್ರಾಮದ ಬುಟ್ಟಿಯಂಡ ಮಾದಪ್ಪ ಎಂಬವರ ಪುತ್ರಿ ಆರತಿ(24) ಕೊಲೆಯಾದ ಯುವತಿ. ಕೊಲೆ ಆರೋಪಿ ತಮ್ಮಯ್ಯ ಎಂಬಾತ ನಾಂಗಾಲದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ಮನೆ ಸಮೀಪವೇ ಆರತಿಯನ್ನು ಕಳೆದ ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಸ್ಥಳದಲ್ಲಿ ಆರೋಪಿ ತಮ್ಮಯ್ಯನಿಗೆ ಸೇರಿದ್ದು ಎನ್ನಲಾದ ಹೆಲ್ಮೆಟ್ ಪತ್ತೆಯಾಗಿದ್ದು, ಸ್ವಲ್ಪ ದೂರದಲ್ಲೇ ಆತನ ಬೈಕ್ ಕೂಡ ಪತ್ತೆಯಾಗಿದೆ. ಈತ ನಾಂಗಾಲದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ತಮ್ಮಯ್ಯ ಈಕೆಗೆ ಕೆಲ ದಿನಗಳಿಂದ ಕಿರುಕುಳ ನೀಡುತ್ತಿದ್ದ ಎನ್ನಲಾಗುತ್ತಿದ್ದು, ಕೊಲೆಗೆ ಕಾರಣ ತಿಳಿದುಬಂದಿಲ್ಲ. ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.