ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ತಾಲೂಕಿನ ಮುಂಡೂರು ಎಂಬಲ್ಲಿ ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ. ಇರಿತಕ್ಕೊಳಗಾದ ಯುವತಿಯು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಯುವತಿಯನ್ನು ಮು೦ಡೂರು ಕ೦ಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದ೦ಪತಿಗಳ ಪುತ್ರಿ ಜಯಶ್ರೀ (23) ಎ೦ದು ಗುರುತಿಸಲಾಗಿದೆ. ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸ್ಥಳಕ್ಕೆ ಸ೦ಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆಗಿನ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.