ಮಡಿಕೇರಿ (ವಿಶ್ವ ಕನ್ನಡಿಗ ನ್ಯೂಸ್) : ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್ ಹಾಗೂ ತಾರ ದಂಪತಿ ಪುತ್ರ ರಕ್ಷಿತ್ ಎಂಬುವವರ ಪತ್ನಿ ಕಾವ್ಯ ಮೃತಪಟ್ಟ ಮಹಿಳೆ.
ಕೆಲಸ ಮುಗಿಸಿ ಪತಿ ರಕ್ಷಿತ್ ಮನೆಗೆ ಬಂದಾಗ ಕಾವ್ಯ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಇವರ ವಿವಾಹವಾಗಿದ್ದು, ಮಕ್ಕಳಿರಲಿಲ್ಲ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.