ವಡೋದರಾ (ವಿಶ್ವ ಕನ್ನಡಿಗ ನ್ಯೂಸ್) : ಗುಜರಾತ್ನ ವಡೋದರಾ ಎಂಎಸ್ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಸೋಮವಾರ ಕ್ಯಾಂಪಸ್ನೊಳಗೆ ಬಾಲಕಿಯೊಬ್ಬಳು ಪ್ರಾರ್ಥಿಸುತ್ತಿರುವ ವಿಡಿಯೋ ಕಾಣಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಎಂಎಸ್ ವಿಶ್ವವಿದ್ಯಾಲಯದ ಅಧಿಕಾರಿಗಳು ಕ್ಯಾಂಪಸ್ನಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸಿ ನೋಟಿಸ್ ಜಾರಿ ಮಾಡಿದ್ದಾರೆ. ವಿಶ್ವವಿದ್ಯಾನಿಲಯವು ಎಲ್ಲಾ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಯಾವುದೇ ರೀತಿಯ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗುವುದನ್ನು ನಿಷೇಧಿಸಿದೆ.
ವೀಡಿಯೋ ವಿವಾದಕ್ಕೀಡಾದ ಬಳಿಕ ಹಲವು ಧಾರ್ಮಿಕ ಸಂಘಟನೆಗಳು ವಿದ್ಯಾರ್ಥಿನಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು. ವೈರಲ್ ವಿಡಿಯೋದಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಲು ಮತ್ತು ಕ್ರಮ ತೆಗೆದುಕೊಳ್ಳಲು ಉನ್ನತ ಮಟ್ಟದ ತನಿಖೆಯನ್ನು ಸಹ ಪ್ರಾರಂಭಿಸಲಾಗಿದೆ.
ಶುಕ್ರವಾರ ವಿದ್ಯಾರ್ಥಿನಿಯು ಕ್ಯಾಂಪಸ್ನಲ್ಲಿ ಪ್ರಾರ್ಥನೆ ಸಲ್ಲಿಸಿದ್ದು, ಸೋಮವಾರ ವಿಡಿಯೋ ವೈರಲ್ ಆಗಿದೆ ಎಂದು ವರದಿಯಾಗಿದೆ. ಎರಡು ತಿಂಗಳಲ್ಲಿ ಮೂರು ರೀತಿಯ ಘಟನೆಗಳು ವರದಿಯಾಗಿವೆ. ವಿಶ್ವವಿದ್ಯಾನಿಲಯ ಆವರಣದಲ್ಲಿ ನಮಾಜ್ ಮಾಡುವುದನ್ನು ವಿರೋಧಿಸಿ ಹಲವು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಹೊಸ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ತನಿಖಾ ಸಮಿತಿ ಸಭೆ ಸೇರಲಿದೆ ಎಂದೂ ವರದಿಯಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.