ಕೊಡಗು (ವಿಶ್ವ ಕನ್ನಡಿಗ ನ್ಯೂಸ್) : ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ನಾಪತ್ತೆಯಾಗಿದ್ದ ಆರೋಪಿ ತಿಮ್ಮಯ್ಯ ಎಂಬಾತನ ಶವ ಯುವತಿಯ ಮನೆ ಬಳಿಯಿರುವ ಕೆರೆಯಲ್ಲಿ ಪತ್ತೆಯಾಗಿದೆ. ಯುವತಿಯನ್ನು ಕೊಲೆಗೈದ ಬಳಿಕ ಈತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೃತ್ಯ ನಡೆದ ದಿನ(ಜ.16) ಆರೋಪಿ ಕೆರೆಗೆ ಹಾರಿದ್ದು, ಆರೋಪಿಗಾಗಿ ಮೂರು ದಿನಗಳಿಂದ ಶೋಧಕಾರ್ಯ ನಡೆಯುತ್ತಿತ್ತು. ಇಂದು ಕೆರೆಯ ಆಳದ ಗಿಡಗಂಟಿಗಳ ಮಧ್ಯೆ ಸಿಲುಕಿದ್ದ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ. ಜನವರಿ 16ರಂದು 24ರ ಹರೆಯದಆರತಿ ಎಂಬ ಯುವತಿಯನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.