ಕೊಚ್ಚಿ (ವಿಶ್ವ ಕನ್ನಡಿಗ ನ್ಯೂಸ್) : ಬಂದ್ ಸಮಯದಲ್ಲಿ ಉಂಟಾದ ದಾಳಿ ವೇಳೆ ಸಾರ್ವಜನಿಕ ವಸ್ತುಗಳನ್ನು ಧ್ವಂಸ ಮಾಡಿದ ದೂರಿನ ಮೇರೆಗೆ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಮುಖಂಡರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಜಪ್ತಿ ಪ್ರಕ್ರಿಯೆಗಳನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಸೂಚಿಸಿದ ನ್ಯಾಯಾಲಯವು ವಿಚಾರಣೆಯನ್ನು ಪೂರ್ಣಗೊಳಿಸಿ ಈ ತಿಂಗಳ 23 ರೊಳಗೆ ವರದಿಯನ್ನು ಸಲ್ಲಿಸುವಂತೆ ಹೇಳಿದೆ. ಜಪ್ತಿ ಪ್ರಕ್ರಿಯೆಗೆ ನೋಟಿಸ್ ನೀಡುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ನ ವಿಭಾಗೀಯ ಪೀಠವು ಸರ್ಕಾರದ ಕ್ರಮಗಳ ವಿಳಂಬದ ವಿರುದ್ಧ ತೀವ್ರ ನಿಲುವು ತೆಗೆದುಕೊಂಡಿತು. ಜಪ್ತಿ ಪ್ರಕ್ರಿಯೆ ಜನವರಿ 15ರೊಳಗೆ ಪೂರ್ಣಗೊಳ್ಳಲಿದೆ ಎಂದು ಗೃಹ ಇಲಾಖೆ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ವಿ. ವೇಣು ಅವರು ಹೈಕೋರ್ಟ್ನಲ್ಲಿ ವಿಚಾರಣೆ ವಿಳಂಬಕ್ಕೆ ವಿಷಾದ ವ್ಯಕ್ತಪಡಿಸಿದ್ದರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.