ಬಾಗಲಕೋಟೆ (ವಿಶ್ವ ಕನ್ನಡಿಗ ನ್ಯೂಸ್) : ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಇಬ್ಬರು ಪುತ್ರಿಯರ ಜೊತೆ ಘಟಪ್ರಭಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ಉಮಾ ಮಾಸರೆಡ್ಡಿ ಹಾಗೂ ಪುತ್ರಿಯರಾದ ಐಶ್ವರ್ಯ, ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡವರು.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿ ನದಿಯಿಂದ ಮೂವರ ಶವ ಹೊರತೆಗೆದಿದ್ದಾರೆ. ಈ ಸಂಬಂಧ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.