(www.vknews.in)ರಾಜ್ಯದ ಎಲ್ಲಾ ಅಂಗವಿಕಲರಿಗೆ ಮುಂಬರುವ ಬಜೆಟ್ ನಲ್ಲಿ ಸರಕಾರವು ಸೌಲಭ್ಯಗಳನ್ನು ಘೋಷಿಸಬೇಕು ಎಂದು ಭಾರತಿಯ ಅಂಗವಿಕಲರ ಸಬಲೀಕರಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಮಾಡಿರುವ ಮನವಿಯನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಪರಿಶೀಲಿಸಲು ಸೂಚಿಸಿ ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅಂಗವಿಕಲರ ಬೇಡಿಕೆಗಳನ್ನು ಪರಿಶೀಲಿಸಲು ಆದೇಶಿಸುವ ಮೂಲಕ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ತಮ್ಮಲ್ಲಿರುವ ಸಹಾನುಭೂತಿಯ ಕಾಳಜಿಯನ್ನು ಎತ್ತಿ ಹಿಡಿದು ಮಾನವೀಯ ಮೌಲ್ಯಗಳನ್ನು ಗೌರವಿಸಿದ್ದಾರೆ ಇದಕ್ಕಾಗಿ ಅಂಗವಿಕಲ ಸಮುದಾಯವು ಸರಕಾರಕ್ಕೆ ಅಭಾರಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.