ದಮ್ಮಾಮ್ (ವಿಶ್ವ ಕನ್ನಡಿಗ ನ್ಯೂಸ್) : ಸೌದಿ ಅರೇಬಿಯಾದ ಜುಬೈಲ್ ನಲ್ಲಿರುವ ತನ್ನ ನಿವಾಸದಲ್ಲಿ ಮಲಗಿದ್ದ ಮಲಪ್ಪುರಂ ನಿವಾಸಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತನನ್ನು ಚೆರುಕಾರ ಕಟ್ಟುಪ್ಪರ ಪೊರುಯಿಲ್ ಹೌಸ್ ನಿವಾಸಿ ಅಲವಿ ಎಂಬವರ ಪುತ್ರ ಮುಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ಪೂರ್ವ ಪ್ರಾಂತ್ಯದ ಜುಬೈಲ್ನಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕೆಲಸದ ನಂತರ ತನ್ನ ನಿವಾಸದಲ್ಲಿ ಮಲಗಿದ್ದ ಮುಹಮ್ಮದ್ ಅಲಿಯನ್ನು ತಮಿಳುನಾಡು ಮೂಲದ ಮಹೇಶ್ ಚಾಕುವಿನಿಂದ ಇರಿದಿದ್ದಾನೆ. ಮುಹಮ್ಮದ್ ಅಲಿ ಹೊರಗೆ ಓಡಿದರೂ ಅವರು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ಬಳಿಕ ಆರೋಪಿ ಮಹೇಶ್ ನನ್ನ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯ ಅಪರಾಧದಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ ಎಂದು ಮಹೇಶ್ ಪೊಲೀಸರಿಗೆ ತಿಳಿಸಿದ್ದಾನೆ. ಆರೋಪಿಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಮುಹಮ್ಮದ್ ಅಲಿ ಜುಬೈಲ್ ‘ಜೆಮ್ಸ್’ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ನಾಲ್ವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತದೇಹವನ್ನು ಜುಬೈಲ್ ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕಂಪನಿಯ ಅಧಿಕಾರಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಸಹಕರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.