ಬಜ್ಪೆ (www.vknews.in) : ಎಸ್.ಡಿ.ಪಿ.ಐ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವತಿಯಿಂದ ಇಂದು ಬಜ್ಪೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋರವರು ದ್ವಜಾರೋಹಣಗೈದರು. ನಂತರ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವು ವಿಶ್ವದಲ್ಲೇ ಶ್ರೇಷ್ಟವಾಗಿದ್ದು ದೇಶದ ಜನರ ಸಾರ್ವಭೌಮತೆಯನ್ನೆ ಎತ್ತಿ ಹಿಡಿಯುತ್ತದೆ. ಇಂದು ದೇಶದ ಸಂವಿಧಾನವು ಅಪಾಯದಲ್ಲಿದ್ದು ಅದನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಹೊಣೆ ಎಂದು ಹೇಳಿದರು.
ಎಸ್.ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಗಣರಾಜ್ಯದಲ್ಲಿ ಸೌಹಾರ್ಧತೆಯನ್ನು ನಾಶಪಡಿಸುವ ಹುನ್ನಾರವೂ ಎಗ್ಗಿಲ್ಲದೇ ನಡೆಯುತ್ತಿದ್ದು ಅಂತಹ ಶಕ್ತಿಗಳ ವಿರುದ್ಧ ತೀವ್ರ ಹೋರಾಟಗಳನ್ನು ಸಂಘಟಿಸುವ ಮೂಲಕ ಸಂವಿಧಾನವನ್ನು ಉಳಿಸುವುದು ನಮ್ಮೆಲ್ಲರ ಹಕ್ಕು ಎಂದು ಹೇಳಿದರು.
ಸಂವಿಧಾನದ ಪೀಠಿಕೆಯ ಧೀಕ್ಷೆಯನ್ನು ಎಸ್.ಡಿ.ಪಿ.ಐ ಮೂಡಬಿದ್ರೆ ವಿಧಾನಸಭಾ ಅದ್ಯಕ್ಷ ಆಸಿಫ್ ಕೋಟೆಬಾಗಿಲು ಬೋಧಿಸಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ ಬಜ್ಪೆ ಪಟ್ಟಣ ಪಂಚಾಯತ್ ಸಮಿತಿ ಅದ್ಯಕ್ಷ ಇಸ್ಮಾಯಿಲ್ ಇಂಜಿನಿಯರ್ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂಧರ್ಭದಲ್ಲಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ನಿಸಾರ್ ಮರವೂರು, ಊರಿನ ಹಿರಿಯರಾದ ಮೋನಾಕ, ಉಮರಾಕ ಆಲ್ದೂರ್, ಹಲವು ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.