ಮೂಡಿಗೆರೆ (ವಿಶ್ವ ಕನ್ನಡಿಗ ನ್ಯೂಸ್) : ಆಲ್ಲೂರು ಸಮೀಪ ವಸ್ತಾರೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸವಾರನ ಮೈಮೇಲೆ ಟ್ರ್ಯಾಕ್ಟರ್ ಹರಿದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಚಾರ್ಮಾಡಿ ಬೀಟಿಗೆ ನಿವಾಸಿ ಸುಲೈಮಾನ್ (35) ಎಂಬವರು ಮೃತ ವ್ಯಕ್ತಿ.
ಬೈಕಿನಲ್ಲಿದ್ದ ಸಹಸವಾರ ಅಶ್ರಫ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಸುಲೈಮಾನ್, ಚಿಕ್ಕಮಗಳೂರಿನ ಸಹೋದರಿಯ ಮನೆಗೆ ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.