(www.vknews.in) : ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಿಸ್ರಿಯಾ ಮಧುರಾ ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಗಣರಾಜ್ಯೋತ್ಸವ ದಿನಾಚರಣೆಯ ಕುರಿತು ಭಾಷಣಗಳನ್ನು ಮಾಡಿದರು ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಿಸ್ರಿಯಾ ಮಧುರಾ, ಸಂಸ್ಥೆಯ ವ್ಯವಸ್ಥಾಪಕ ಜಾಫರ್ ಸಾಧಿಕ್, ಸಂಸ್ಥೆಯ ಮುಖ್ಯ ಶಿಕ್ಷಕಿ ತಪಸ್ವಿನಿ.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಮನೋದ, ಶ್ವೇತಾ ಮಾರಿಯಾ ಡಿಸೋಜ, ಶೈಖ್ ಝಹೀರಾ ಬಾನು ಗಣರಾಜ್ಯೋತ್ಸವ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಿಕ್ಷಕಿ ಶಿಫಾನತ್ ಸ್ವಾಗತಿಸಿ ಪ್ರತೀಕ್ಷಾ ವಂದಿಸಿದರು ಫಾತಿಮಾತ್ ಶಫ್ರೀನಾ ಕಾರ್ಯಕ್ರಮವನ್ನು ನಿರೂಪಿಸಿದರು.ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.