ಚಾಮರಾಜನಗರ (ವಿಶ್ವ ಕನ್ನಡಿಗ ನ್ಯೂಸ್) : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಸೆಲ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ನಡೆದಿದೆ. ನಂಜನಗೂಡು ತಾಲೂಕಿನ ಸಿದ್ದನಯ್ಯನಹುಂಡಿ ಗ್ರಾಮದ ಸಮೃದ್ದಿ ಮೃತಪಟ್ಟ ಮಹಿಳೆ. ಅವರ ಪತಿ ನಾಗೇಂದ್ರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಊಟಿ ಪ್ರವಾಸ ಮುಗಿಸಿ ಮೈಸೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಮಹಿಳೆಯ ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಅಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಪೊಲೀಸರು ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.