ಕುಂದಾಪುರ (ವಿಶ್ವ ಕನ್ನಡಿಗ ನ್ಯೂಸ್) : ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾ.ಹೆ. 66ರ ತಲ್ಲೂರು ಸಮೀಪದ ರಾಜಾಡಿಯಲ್ಲಿ ಸಂಭವಿಸಿದೆ. ಕನ್ಯಾನ ಗ್ರಾಮದ ದಿ| ಕುಪ್ಪಯ್ಯ ಶೆಟ್ಟಿ ಅವರ ಪುತ್ರ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕುಡಿತದ ಚಟ ಹೊಂದಿದ್ದ ರವಿರಾಜ್, ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ತಾಯಿ ಅವರನ್ನು ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ವೇಳೆ ಅಲ್ಲಿಂದ ಹೇಳದೆ ಹೋಗಿ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಮೃತದೇಹವನ್ನು ಮೇಲೆತ್ತಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.