ಪೇಶಾವರ (ವಿಶ್ವ ಕನ್ನಡಿಗ ನ್ಯೂಸ್) : ಪಾಕಿಸ್ತಾನದ ಪೇಶಾವರ ನಗರದ ಮಸೀದಿಯೊಂದರ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 100 ದಾಟಿದೆ. ಘಟನೆಯಲ್ಲಿ 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಸೀದಿ ಒಳಗೆ ಸುಮಾರು 400ಕ್ಕೂ ಹೆಚ್ಚು ಜನರಿದ್ದರು.
ಸ್ಫೋಟಕ್ಕೆ ಕಾರಣವಾದ ತಾಲಿಬಾನ್ ಆತ್ಮಾಹುತಿ ಬಾಂಬರ್ನ ಕತ್ತರಿಸಿದ ತಲೆಯನ್ನು ಘಟನಾ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೇಶಾವರ್ ನಗರ ಪೊಲೀಸ್ ಅಧಿಕಾರಿ ಮೊಹಮ್ಮದ್ ಐಜಾಜ್ ಖಾನ್ ತಿಳಿಸಿದ್ದಾರೆ. ಮೃತದೇಹಗಳನ್ನು ಹುಡುಕುತ್ತಿರುವಾಗ ಆತ್ಮಹತ್ಯಾ ಬಾಂಬರ್ನ ತಲೆ ಕೂಡ ಪತ್ತೆಯಾಗಿದೆ.
ಸೋಮವಾರ ಮಧ್ಯಾಹ್ನ 1.30 ರ ಸುಮಾರಿಗೆ ಘಟನೆ ಸಂಭವಿಸಿದೆ. ಮಧ್ಯಾಹ್ನದ ಪ್ರಾರ್ಥನೆಯ ಸಮಯದಲ್ಲಿ ಬಾಂಬರ್ ಮಸೀದಿಯ ಮೊದಲ ಸಾಲಿನಲ್ಲಿದ್ದರು. ಭದ್ರತಾ ವ್ಯವಸ್ಥೆಗಳನ್ನು ಉಲ್ಲಂಘಿಸಿ ಅವನು ಮಸೀದಿಯನ್ನು ಹೇಗೆ ಪ್ರವೇಶಿಸಿದನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.