ರಿಯಾದ್(ವಿಶ್ವಕನ್ನಡಿಗ ನ್ಯೂಸ್): ಸೌದಿ ಅರೇಬಿಯಾದ ಅಲ್ ಹಸ್ಸದಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರಿನ ಮೂವರು ಯುವಕರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಸಂಚರಿಸುತ್ತಿದ್ದ ಕಾರಿಗೆ ಒಂಟೆಯೊಂದು ಡಿಕ್ಕಿ ಹೊಡೆದ ಪರಿಣಾಮ ನಡೆದ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರನ್ನು ಹಳೆಯಂಗಡಿ ಕದಿಕೆಯ ರಿಝ್ವಾನ್, ಕೃಷ್ಣಾಪುರದ ಅಕೀಲ್, ನಾಸಿರ್, ಶಿಹಾಬ್ ಎಂದು ಗುರುತಿಸಲಾಗಿದೆ.
ಮಧ್ಯರಾತ್ರಿ ಕೆಲಸಕ್ಕೆಂದು ಕಾರೊಂದರಲ್ಲಿ (ಪಿಕ್ ಅಪ್ ವಾಹನ) ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್ ಹಸ ಖುರೈಸ್ ರಸ್ತೆಯಲ್ಲಿ ಹೋಗುತ್ತಿದ್ದಂತೆ ಒಂಟೆಯೊಂದು ಏಕಾಏಕಿ ಅಡ್ಡ ಬಂದಿದೆ. ಈ ವೇಳೆ ಕಾರಿಗೆ ಒಂಟೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಇವರೆಲ್ಲರೂ SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು. ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.