(ವಿಶ್ವ ಕನ್ನಡಿಗ ನ್ಯೂಸ್) : ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮುಹಮ್ಮದ್ ಇಬ್ರಾಹಿಂ ತೌಫೀಕ್ (23) ಬಂಧಿತ ಆರೋಪಿ.
ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿರುವ ಬಾಲಕಿಯನ್ನು ತೌಫೀಕ್ ವಿವಿಧ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ತೌಫೀಕ್ ನನ್ನು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.