ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಾದಕ ದ್ರವ್ಯ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿಗಳನ್ನು ಪುತ್ತೂರು ಮತ್ತು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. 2009ರಲ್ಲಿ ಗಾಂಜಾ ಸಾಗಾಟ ಪ್ರಕರಣದಲ್ಲಿ ಪುತ್ತೂರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮುಹಮ್ಮದ್ ಬಶೀರ್ (39) ಜಾಮೀನಿನ ಮೇಲೆ ಬಿಡುಗಡೆಯಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಕಳೆದ ಐದು ವರ್ಷಗಳಲ್ಲಿ ಹಲವಾರು ಬಾರಿ ನೋಟಿಸ್ ಕಳುಹಿಸಲಾಗಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ ಬಂಧನ ವಾರಂಟ್ ಹೊರಡಿಸಲಾಗಿದೆ.
ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದ ಅಂಜುಮ್ ಖಾನ್ (41) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಆರು ವರ್ಷಗಳಿಂದ ನಂತರ ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯವನಾದ ಈತನನ್ನು 2016ರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಬಂಧಿಸಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.