ಅಂಕಾರಾ (ವಿಶ್ವ ಕನ್ನಡಿಗ ನ್ಯೂಸ್) : ಟರ್ಕಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಧ್ಯಕ್ಷ ತಯ್ಯಿಪ್ ಎರ್ಡೊಗನ್ ಮೂರು ತಿಂಗಳ ಕಾಲ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಟರ್ಕಿ, ಸಿರಿಯಾ ಮತ್ತು ನೆರೆಯ ದೇಶಗಳಲ್ಲಿ ಸಂಭವಿಸಿದ ಭೂಕಂಪದಲ್ಲಿ 5,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ಹುಡುಕುವ ಪ್ರಯತ್ನಗಳು ನಡೆಯುತ್ತಿವೆ.
ರಿಕ್ಟರ್ ಮಾಪಕದಲ್ಲಿ 7.8 ರಷ್ಟು ತೀವ್ರತೆಯ ಮೊದಲ ಭೂಕಂಪದ ನಂತರ ಈ ಪ್ರದೇಶದಲ್ಲಿ ಐದು ಭೂಕಂಪನಗಳು ಸಂಭವಿಸಿವೆ ಎಂದು ವರದಿಯಾಗಿದೆ. ವಿಪರೀತ ಚಳಿ ಮತ್ತು ಮಳೆ ಸೇರಿದಂತೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ. ಇಲ್ಲಿನ ತಾಪಮಾನವು ಮೈನಸ್ ಐದು ಡಿಗ್ರಿ ಸೆಲ್ಸಿಯಸ್ ಆಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.