ಮೂಡುಬಿದಿರೆ (ವಿಶ್ವ ಕನ್ನಡಿಗ ನ್ಯೂಸ್) : ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಹೇಳಿದ್ದಕ್ಕೆ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ. ಕೋಟೆ ಬಾಗಿಲು ನಿವಾಸಿ ಟಿಪ್ಪರ್ ಚಾಲಕ ಆರೀಸ್ ಬಂಧಿತ ಆರೋಪಿಯಾಗಿದ್ದಾನೆ.
ಕಳೆದ ಶುಕ್ರವಾರ ಕೋಟೆಬಾಗಿಲಿನ ನಿವಾಸಿ ಫಯಾಝ್ ಅವರಿಗೆ ಆರೀಸ್ ರಾಡ್ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.
ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್ನನ್ನು ಬಂಧಿಸಲು ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಇದೀಗ ಆರೋಪಿಎಯನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.