ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಬಳಿ ಸಂಭವಿಸಿದೆ. ಹುಬ್ಬಳ್ಳಿ ನಿವಾಸಿಗಳಾದ ಮುಹಮ್ಮದ್ ಇಶಾನ್, ಮುಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಮೃತಪಟ್ಟ ಯುವಕರು.
ತಮ್ಮ ಕಾರಿನಲ್ಲಿ ಹುಬ್ಬಳ್ಳಿಯಿಂದ ಒಟ್ಟು 6 ಯುವಕರು ಕಾರವಾರದ ಕಡೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಸಂಗಟಿಕೊಪ್ಪದಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.