ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕದ್ರಿ ಉದ್ಯಾನವನದ ಬಳಿ ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರಾದ ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ ಧೀರಜ್, ಬಂಟ್ವಾಳದ ಅಭಿಜಿತ್ ಬಂಧಿತ ಆರೋಪಿಗಳು.
ಇವರು ಬುಧವಾರ ಉತ್ತರ ಕರ್ನಾಟಕ ಮೂಲದ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.