ತುಮಕೂರು (ವಿಶ್ವ ಕನ್ನಡಿಗ ನ್ಯೂಸ್) : ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸಿಕೆರೆ ಮೂಲದ ರಘು (35) ಹಾಗೂ ಅನುಷಾ (28) ಮೃತ ದಂಪತಿಗಳು.
ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಘು ಹಾಗೂ ಅನುಷಾ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಸಂಬಂಧಿಕರ ಮನೆಯ ಮದುವೆಗೆಂದು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.