ಬಸ್ತಾರ್ (ವಿಶ್ವ ಕನ್ನಡಿಗ ನ್ಯೂಸ್) ; ಸ್ಥಳೀಯ ಬಿಜೆಪಿ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಛತ್ತೀಸ್ ಗಢದ ಬಸ್ತಾರ್ ಪ್ರದೇಶದ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಎಂದು ಗುರುತಿಸಲಾಗಿದೆ. ದಾಳಿಕೋರನು ಮನೆಗೆ ನುಗ್ಗಿ ಸಾಹುವಿನ ಕುಟುಂಬ ಸದಸ್ಯರ ಮುಂದೆಯೇ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗುಂಡೇಟಿನಿಂದ ಗಾಯಗೊಂಡ ಸಾಗರ್ ಸಾಹು ಅವರನ್ನು ತಕ್ಷಣ ಛೋಟೆಡೊಂಗರ್ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ನಾರಾಯಣಪುರದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅವರ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಈ ದಾಳಿಯ ಹಿಂದೆ ಮಾವೋವಾದಿಗಳ ಕೈವಾಡವಿದೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.