ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ಈಜಲು ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೊಡ್ಡೇರಿ ಸಮೀಪದ ಪಯಸ್ವಿನಿ ನದಿಯಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತಪಟ್ಟ ಯುವಕರು.
ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ, ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ಆತ ಇಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಹೋದ ಇನ್ನೊರ್ವ ಸ್ನೇಹಿತನೂ ನೀರು ಪಾಲಾಗಿದ್ದಾನೆ. ಸ್ಥಳೀಯ ಈಜುಗಾರ ಯುವಕರು ಕಾರ್ಯಾಚರಣೆ ನಡೆಸಿ ನೀರಲ್ಲಿ ಮುಳುಗಿದ್ದ ಯುವಕರ ಶವವನ್ನು ಮೇಲೆತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.