ಕೋಲ್ಕತಾ (ವಿಶ್ವ ಕನ್ನಡಿಗ ನ್ಯೂಸ್) : ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತೆಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಕ್ಯಾನಿಂಗ್ ಪಟ್ಟಣದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ಮಹಿಳೆಯನ್ನು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತೆ ಸುಚಿತ್ರಾ ಮಂಡಲ್ (48) ಎಂದು ಗುರುತಿಸಲಾಗಿದೆ.
ಸ್ಥಳೀಯರ ಪ್ರಕಾರ, ಆಲೂಗಡ್ಡೆ ತೋಟದಲ್ಲಿ ರಕ್ತದ ಮಡುವಿನಲ್ಲಿ ಸುಚಿತ್ರ ಅವರ ಶವ ಪತ್ತೆಯಾಗಿದೆ. ಅವರ ಕುತ್ತಿಗೆಯ ಮೇಲೆ ಆಳವಾದ ಗಾಯಗಳಿದ್ದವು. ಸ್ಥಳೀಯರು ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ತಲುಪಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟೊತ್ತಿಗಾಗಲೇ ಸಾವು ಸಂಭವಿಸಿತ್ತು. ಕೊಲೆಯ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಕೊಲೆಗೆ ರಾಜಕೀಯ ಸಂಬಂಧವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.